Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:24 - ಕನ್ನಡ ಸಮಕಾಲಿಕ ಅನುವಾದ

24 “ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:24
44 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ.


ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ.


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾದರೆ, ಯೆಹೋವ ದೇವರು ನಿಮಗೆ ಕೊಟ್ಟ ದನಕುರಿಗಳಿಂದ ನಾನು ನಿಮಗೆ ಆಜ್ಞಾಪಿಸಿದಂತೆ ನಿಮ್ಮ ಊರಲ್ಲೇ ನಿಮಗೆ ಮನಸ್ಸಿದ್ದಷ್ಟು ಮಾಂಸಾಹಾರವನ್ನು ಮಾಡಿ ಉಣ್ಣಬಹುದು.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.


ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.


ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.


ಅದಕ್ಕೆ ಮೋಶೆಯು ಅವನಿಗೆ, “ನಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸುವುದಕ್ಕಾಗಿ ಯಜ್ಞಗಳನ್ನೂ ದಹನಬಲಿಗಳನ್ನೂ ತೆಗೆದುಕೊಂಡು ಹೋಗಲು ಅಪ್ಪಣೆಬೇಕು.


ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.


ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ.


ಅವನು ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಹೋರಿಗಳನ್ನೂ ಅರ್ಪಿಸುವುದಕ್ಕಾಗಿ ಇಸ್ರಾಯೇಲರ ಯೌವನಸ್ಥರನ್ನು ಕಳುಹಿಸಲು ಅವರು ಅದನ್ನು ಅರ್ಪಿಸಿದರು.


“ಇದಲ್ಲದೆ ಜಾಲಿ ಮರದಿಂದ ಬಲಿಪೀಠವನ್ನು ಮಾಡಬೇಕು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.


ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.


ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ?


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.


ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು