Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:25 - ಕನ್ನಡ ಸಮಕಾಲಿಕ ಅನುವಾದ

25 ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು; ಅದಕ್ಕೆ ಉಳಿ ಮುಂತಾದದ್ದನ್ನು ಉಪಯೋಗಿಸಿದರೆ ಅದು ಅಪರಿಶುದ್ಧವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂದ ಕೆತ್ತಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:25
6 ತಿಳಿವುಗಳ ಹೋಲಿಕೆ  

ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು.


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ.


ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ನಿರ್ಮಿತವಾಗಿದ್ದವು. ಅವುಗಳ ಉದ್ದ ಮತ್ತು ಅಗಲ ಸುಮಾರು ಎಂಬತ್ತು ಸೆಂಟಿಮೀಟರ್, ಎತ್ತರವೂ ಸುಮಾರು ಐವತ್ತಮೂರು ಸೆಂಟಿಮೀಟರ್. ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿಸುವ ಸಲಕರಣೆಗಳನ್ನೂ ಇಡುತ್ತಿದ್ದರು.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು