Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:4 - ಕನ್ನಡ ಸಮಕಾಲಿಕ ಅನುವಾದ

4 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:4
41 ತಿಳಿವುಗಳ ಹೋಲಿಕೆ  

“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!


“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.


ನಾನೇ ಯೆಹೋವ ದೇವರು, ಅದೇ ನನ್ನ ಹೆಸರು. ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತುತಿಯನ್ನು ಎರಕದ ವಿಗ್ರಹಗಳಿಗೂ ಕೊಡೆನು.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು.


ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


“ನಿಮಗಾಗಿ ದೇವರುಗಳ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಕೊಳ್ಳಬಾರದು.


ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.


ಅವರು ನನಗೆ, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,’ ಎಂದು ಹೇಳಿದರು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”


ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”


ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.


“ನೀವು ಈ ಕಾರ್ಯವನ್ನು ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರೂ, ಅವರು ಮೂರ್ತಿಗಳಿಗೆ ಪೂಜೆ ಮಾಡಿದರು.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.”


ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.


ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು