ವಿಮೋಚನಕಾಂಡ 21:13 - ಕನ್ನಡ ಸಮಕಾಲಿಕ ಅನುವಾದ13 ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ. ಅಧ್ಯಾಯವನ್ನು ನೋಡಿ |