ವಿಮೋಚನಕಾಂಡ 21:19 - ಕನ್ನಡ ಸಮಕಾಲಿಕ ಅನುವಾದ19 ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ, ಅವನನ್ನು ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಪೆಟ್ಟು ತಿಂದವನು ಗುಣಹೊಂದುವವರೆಗೆ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನನ್ನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಂಥ ಸಂದರ್ಭಗಳಲ್ಲಿ ಹೊಡೆದವನಿಗೆ ಶಿಕ್ಷೆಯಾಗಬಾರದು. ಆದರೆ ಗಾಯಗೊಂಡವನು ಕೆಲಸ ಮಾಡಲಾರದೆ ಹೋದ ಕಾಲಕ್ಕೆ ತಕ್ಕಷ್ಟು ಹಣ ಕೊಡಬೇಕು. ಹಾಗು ಅವನು ಪೂರ್ಣ ಸ್ವಸ್ಥನಾಗುವ ವರೆಗೂ ನೋಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೂ ಆ ಮನುಷ್ಯನು ಕೆಲಸಮಾಡಲಾರದೆಹೋದ ಕಾಲಕ್ಕೆ ಅವನು ತಕ್ಕಷ್ಟು ಹಣಕೊಟ್ಟು ಅವನನ್ನು ಪೂರ್ಣವಾಗಿ ಸ್ವಸ್ಥಪಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು. ಅಧ್ಯಾಯವನ್ನು ನೋಡಿ |