ವಿಮೋಚನಕಾಂಡ 21:2 - ಕನ್ನಡ ಸಮಕಾಲಿಕ ಅನುವಾದ2 “ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |