Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:30 - ಕನ್ನಡ ಸಮಕಾಲಿಕ ಅನುವಾದ

30 ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿಸಿದರೆ, ಅವನು ತನಗೆ ನೇಮಿಸಿದ್ದನ್ನೆಲ್ಲಾ ತನ್ನ ಪ್ರಾಣವಿಮೋಚನೆಗಾಗಿ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೆ ಆ ಒಡೆಯ ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು ತೀರ್ಮಾನವಾದರೆ ನೇಮಕವಾದ ಹಣವನ್ನು ಕೊಟ್ಟು ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಆ ಒಡೆಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು [ನ್ಯಾಯಾಧಿಪತಿಗಳು] ತೀರ್ಮಾನಿಸಿದರೆ ನೇಮಕವಾದ ಹಣವನ್ನು ಅವನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲೀಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:30
6 ತಿಳಿವುಗಳ ಹೋಲಿಕೆ  

“ಜನರು ಜಗಳವಾಡುವಾಗ ಗರ್ಭಿಣಿಯಾದ ಸ್ತ್ರೀಗೆ ಏಟು ತಗಲಿ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.


“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.


ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.


ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೆ ಇದ್ದುದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದುಹಾಕಿದರೆ, ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಆದರೆ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.


ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು