ವಿಮೋಚನಕಾಂಡ 21:36 - ಕನ್ನಡ ಸಮಕಾಲಿಕ ಅನುವಾದ36 ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿದ್ದರೂ, ಅದರ ಯಜಮಾನನು ಅದನ್ನು ಕಟ್ಟಿಹಾಕದೆ ಹೋಗಿದ್ದರೆ, ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲುಕೊಡಬೇಕು. ಆದರೆ ಸತ್ತ ಪಶುವನ್ನು ಅವನು ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆದರೆ ಅದಕ್ಕೆ ಮುಂಚಿತವಾಗಿಯೇ ಆ ಎತ್ತು ತಿವಿಯುವಂಥದ್ದೇ ಎಂದು ತಿಳಿದಿದ್ದರೂ ಅದರ ಒಡೆಯ ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದರೆ ಅದಕ್ಕೆ ಮುಂಚಿತವಾಗಿ ಆ ಎತ್ತು ಹಾಯುವಂಥದೇ ಎಂದು ತಿಳಿದಿದ್ದಾಗ್ಯೂ ಅದರ ಒಡೆಯನು ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲೀಕನು ಅದನ್ನು ಕಟ್ಟಿಹಾಕದಿದ್ದರಿಂದ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |