Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:4 - ಕನ್ನಡ ಸಮಕಾಲಿಕ ಅನುವಾದ

4 ಅವನ ಯಜಮಾನನು ಅವನಿಗೆ ಮದುವೆಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ಅವನು ಒಬ್ಬನಾಗಿಯೇ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನ ಯಜಮಾನ ಅವನಿಗೆ ಮದುವೆ ಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣು ಮಕ್ಕಳಾಗಿದ್ದರೆ ಆ ಹೆಂಡತಿ ಹಾಗು ಅವಳ ಮಕ್ಕಳು ಯಜಮಾನನ ಸೊತ್ತಾಗುವರು. ಆ ಗುಲಾಮನು ಒಂಟಿಯಾಗಿಯೇ ಹೊರಟು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣು ಮಕ್ಕಳು ಹುಟ್ಟಿದ್ದರೆ ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು; ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:4
4 ತಿಳಿವುಗಳ ಹೋಲಿಕೆ  

ಅವನು ಒಬ್ಬನಾಗಿ ಬಂದಿದ್ದರೆ, ಒಬ್ಬನಾಗಿಯೇ ಹೋಗಬೇಕು. ಅವನು ಮದುವೆಯಾದವನಾಗಿದ್ದರೆ, ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.


“ಆದರೆ ದಾಸನು, ‘ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿಮಾಡುತ್ತೇನೆ. ಆದ್ದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,’ ಎಂದು ಸ್ವಷ್ಟವಾಗಿ ಹೇಳಿದರೆ,


ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.


ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು