ವಿಮೋಚನಕಾಂಡ 21:5 - ಕನ್ನಡ ಸಮಕಾಲಿಕ ಅನುವಾದ5 “ಆದರೆ ದಾಸನು, ‘ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿಮಾಡುತ್ತೇನೆ. ಆದ್ದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,’ ಎಂದು ಸ್ವಷ್ಟವಾಗಿ ಹೇಳಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಆ ಗುಲಾಮನು ತಾನು ತನ್ನ ಯಜಮಾನನನ್ನೂ ತನ್ನ ಮಡದಿ ಮಕ್ಕಳನ್ನೂ ಪ್ರೀತಿಸುತ್ತೇನೆ, ಈ ಕಾರಣ ಬಿಡುಗಡೆ ಹೊಂದಿ ಹೋಗಲು ಇಷ್ಟವಿಲ್ಲವೆಂದು ದೃಢವಾಗಿ ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಆ ದಾಸನು - ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿ ಮಕ್ಕಳನ್ನೂ ಪ್ರೀತಿಸುತ್ತೇನಾದದರಿಂದ ಅವರನ್ನು ಅಗಲಿ ಬಿಡುಗಡೆಯಾಗಿ ಹೋಗಲೊಲ್ಲೆನೆಂದು ದೃಢವಾಗಿ ಹೇಳಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದದೆ ಇಲ್ಲೇ ಇರುವೆನು’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |