ವಿಮೋಚನಕಾಂಡ 21:8 - ಕನ್ನಡ ಸಮಕಾಲಿಕ ಅನುವಾದ8 ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವಳನ್ನು ತನಗಾಗಿ ಗೊತ್ತುಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಅವನಿಂದ ಬಿಡಿಸಿಕೊಳ್ಳಲು ಅವಳಿಗೆ ಅವಕಾಶಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದುದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವಳನ್ನು ಗೊತ್ತು ಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಬಿಡಿಸಿಕೊಳ್ಳಲಿಕ್ಕೆ ಅವಳಿಗೆ ಅನುಕೂಲಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದದರಿಂದ ಅನ್ಯಜನರಿಗೆ ಅವಳನ್ನು ಮಾರುವದಕ್ಕೆ ಅವನಿಗೆ ಅಧಿಕಾರವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು. ಅಧ್ಯಾಯವನ್ನು ನೋಡಿ |