Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:13 - ಕನ್ನಡ ಸಮಕಾಲಿಕ ಅನುವಾದ

13 ಕಾಡುಮೃಗವು ಅದನ್ನು ಕೊಂದಿದ್ದರೆ, ಅದರ ಹೆಣವನ್ನು ಸಾಕ್ಷಿಗಾಗಿ ತರಲಿ. ಕಾಡುಮೃಗ ಕೊಂದಿದ್ದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಡುಮೃಗ ಅದನ್ನು ಕೊಂದಿದ್ದರೆ ಅದರ ಅವಶೇಷವನ್ನು ಆಧಾರವಾಗಿ ತೋರಿಸಲಿ. ಕಾಡುಮೃಗದಿಂದ ಕೊಂದುದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಡುಮೃಗವು ಕೊಂದಿದ್ದರೆ ಅದರ ಹೆಣವನ್ನು ತೋರಿಸಲಿ; ಕಾಡುಮೃಗವು ಕೊಂದದಕ್ಕೆ ಬದಲುಕೊಡಬೇಕಾದ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕ್ರೂರಪ್ರಾಣಿಗಳು ಆ ಪಶುವನ್ನು ಕೊಂದುಹಾಕಿದ್ದರೆ, ನೆರೆಯವನು ಸತ್ತ ಪಶುವನ್ನು ಸಾಕ್ಷಿಯಾಗಿ ತರಬೇಕು. ನೆರೆಯವನು ಮಾಲೀಕನಿಗೆ ಸತ್ತ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:13
6 ತಿಳಿವುಗಳ ಹೋಲಿಕೆ  

ಸಿಂಹವು, ತನ್ನ ಮರಿಗಳಿಗೆ, ಸಿಂಹಿಣಿಗಳಿಗೆ, ಕೊರಳು ಹಿಸುಕಿ ಕೊಂದ ಪ್ರಾಣಿಗಳಿಂದ ತನ್ನ ಗುಹೆಯನ್ನು ತುಂಬಿಸುತ್ತಿತ್ತು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು.


“ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಲಾಗಿ ತೆಗೆದುಕೊಂಡಿರಲಾಗಿ ಅದರ ಒಡೆಯನು ಅದರ ಹತ್ತಿರ ಇಲ್ಲದಿರುವಾಗ, ಆ ಪಶುವಿಗೆ ಊನವಾದರೆ, ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಈಡು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು