Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:17 - ಕನ್ನಡ ಸಮಕಾಲಿಕ ಅನುವಾದ

17 ಆಕೆಯ ತಂದೆಗೆ ಆಕೆಯನ್ನು ಕೊಡುವುದಕ್ಕೆ ಮನಸ್ಸಿಲ್ಲದಿದ್ದರೆ, ಅವನಿಗೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವಳ ತಂದೆ ಅವಳನ್ನು ಅವನಿಗೆ ಕೊಡಲು ಒಪ್ಪದೆ ಹೋದರೆ ಆ ವ್ಯಕ್ತಿ ತಕ್ಕ ತೆರವನ್ನು ಹೇಗೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವಳ ತಂದೆ ಅವಳನ್ನು ಅವನಿಗೆ ಕೊಡುವದಕ್ಕೆ ಒಪ್ಪದೆ ಹೋದರೆ ಆ ಮನುಷ್ಯನು ತಕ್ಕ ತೆರವನ್ನು ಹೇಗೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:17
9 ತಿಳಿವುಗಳ ಹೋಲಿಕೆ  

ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.


ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು.


ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.


ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು