Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:18 - ಕನ್ನಡ ಸಮಕಾಲಿಕ ಅನುವಾದ

18 “ಮಾಟಗಾರ್ತಿಯನ್ನು ಬದುಕಲು ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಮಾಟಗಾರ್ತಿಯನ್ನು ಬದುಕಲು ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮಾಟಗಾರ್ತಿಯನ್ನು ಬದುಕಲೀಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಮಾಟಗಾರ್ತಿಯನ್ನು ನೀವು ಜೀವಸಹಿತ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:18
17 ತಿಳಿವುಗಳ ಹೋಲಿಕೆ  

“ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು.


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.


ಆ ಸ್ತ್ರೀಯು ಅವನಿಗೆ, “ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವುದಕ್ಕೆ ಕಾರಣವಾಗುವ ಹಾಗೆ ಏಕೆ ನನ್ನ ಪ್ರಾಣಕ್ಕೆ ಉರುಳಿಡುತ್ತಿ?” ಎಂದಳು.


‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.


“ ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು.


ಅವರು, “ಪಶುಸಂಗಮ ಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು