Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:29 - ಕನ್ನಡ ಸಮಕಾಲಿಕ ಅನುವಾದ

29 “ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:29
19 ತಿಳಿವುಗಳ ಹೋಲಿಕೆ  

“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.


“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ಪಶುಗಳಾಗಲಿ, ಎತ್ತುಗಳಾಗಲಿ, ಟಗರುಗಳಾಗಲಿ ಮೊದಲು ಹುಟ್ಟುವವುಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.


ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.


ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.


ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.


“ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.


ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು