Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:3 - ಕನ್ನಡ ಸಮಕಾಲಿಕ ಅನುವಾದ

3 ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೂರ್ಯೋದಯವಾದನಂತರ ಒಬ್ಬನು ಕಳ್ಳನನ್ನು ಹೊಡೆದು ಕೊಂದರೆ ಅದು ನರಹತ್ಯವೇ ಸರಿ.) ಅವನು ಪೂರ್ತಿಯಾಗಿ ಸಲ್ಲಿಸಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ದಾಸನಾಗಿ ಮಾರಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:3
9 ತಿಳಿವುಗಳ ಹೋಲಿಕೆ  

“ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.


ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


“ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು.


ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು.


ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು