ವಿಮೋಚನಕಾಂಡ 22:30 - ಕನ್ನಡ ಸಮಕಾಲಿಕ ಅನುವಾದ30 ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |