Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:5 - ಕನ್ನಡ ಸಮಕಾಲಿಕ ಅನುವಾದ

5 “ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ, ದ್ರಾಕ್ಷಿ ತೋಟವನ್ನೂ ಮೇಯಿಸಿದರೆ, ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ, ದ್ರಾಕ್ಷಿ ತೋಟದಲ್ಲಿನ ಉತ್ತಮವಾದದ್ದನ್ನೂ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷೇತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೂ ಹೋಗಿ ಮೇಯುವಂತೆ ಮಾಡಿದರೆ ತನ್ನ ಹೊಲದ ಅಥವಾ ದ್ರಾಕ್ಷೇತೋಟದ ಉತ್ತಮಭಾಗದಲ್ಲಿ ಅವನಿಗೆ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:5
7 ತಿಳಿವುಗಳ ಹೋಲಿಕೆ  

ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ.


ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು.


ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.


ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.


“ಬೆಂಕಿಹತ್ತಿ ಅದು ಮುಳ್ಳಿನ ಕೊಂಪೆಗೆ ತಗುಲಿ, ಸಿವುಡುಗಳ ಬಣವೆಗಳನ್ನಾಗಲಿ, ನಿಂತ ಬೆಳೆಯನ್ನಾಗಲಿ, ಹೊಲವನ್ನಾಗಲಿ ಸುಟ್ಟುಬಿಟ್ಟರೆ, ಆ ಬೆಂಕಿಯನ್ನು ಹಚ್ಚಿದವನು ಖಂಡಿತವಾಗಿ ಈಡು ಕೊಡಬೇಕು.


ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು