ವಿಮೋಚನಕಾಂಡ 22:7 - ಕನ್ನಡ ಸಮಕಾಲಿಕ ಅನುವಾದ7 “ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಬ್ಬನು ಹಣವನ್ನಾದರೂ ಒಡವೆಗಳನ್ನಾದರೂ ಕಾಪಾಡುವದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳವಾಗಿ ಹೋದರೆ ಕಳ್ಳನು ಸಿಕ್ಕುವ ಪಕ್ಷಕ್ಕೆ ಎರಡರಷ್ಟು ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲಿ ವಸ್ತುಗಳನ್ನಾಗಲಿ ಇಟ್ಟಿದ್ದು, ಆ ಹಣವಾಗಲಿ ವಸ್ತುಗಳಾಗಲಿ ಕಳುವಾದರೆ ಕಳ್ಳನನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು. ಅಧ್ಯಾಯವನ್ನು ನೋಡಿ |