Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:12 - ಕನ್ನಡ ಸಮಕಾಲಿಕ ಅನುವಾದ

12 “ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳೂ ಕತ್ತೆಗಳೂ ದಾಸದಾಸಿಯರೂ ಪರದೇಶಸ್ಥರೂ ವಿಶ್ರವಿುಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:12
13 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.


ಸಬ್ಬತ್ ದಿನದಲ್ಲಿ ನೀವು ವಾಸಮಾಡುವ ಯಾವ ಮನೆಯಲ್ಲಿಯೂ ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.


‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


“ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು.


ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.


ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.


ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು.


ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧವಾಗಿರಬೇಕು. ಅದು ಯೆಹೋವ ದೇವರ ಸಬ್ಬತ್ ದಿನ. ಆ ದಿನದಲ್ಲಿ ಕೆಲಸಮಾಡುವವರಿಗೆ ಮರಣದಂಡನೆಯಾಗಬೇಕು.


“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


ಇದಲ್ಲದೆ ಮೀನುಗಳನ್ನೂ, ಎಲ್ಲಾ ಸರಕುಗಳನ್ನೂ ತೆಗೆದುಕೊಂಡು ಬಂದು ಸಬ್ಬತ್ ದಿನದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ಟೈರಿನವರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು