Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:20 - ಕನ್ನಡ ಸಮಕಾಲಿಕ ಅನುವಾದ

20 “ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:20
26 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.


ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.


ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ, ನಿಮ್ಮ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ ಯೆಹೋವ ದೇವರೇ, ನೀವು ವಾಸಿಸುವುದಕ್ಕೆ ಮಾಡಿಕೊಂಡಿರುವ ನಿಮ್ಮ ಸ್ವತ್ತಾಗಿರುವ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿರಿ.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


“ಅವನು ನನಗೆ, ‘ನಾನು ಯಾರ ಮುಂದೆ ನಂಬಿಗಸ್ತಿಕೆಯಿಂದ ನಡೆದುಕೊಳ್ಳುತ್ತೇನೋ, ಆ ಯೆಹೋವ ದೇವರು ತಮ್ಮ ದೂತನನ್ನು ನಿನ್ನ ಸಂಗಡ ಕಳುಹಿಸಿ, ನೀನು ನನ್ನ ಬಂಧುಗಳಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ನಿನ್ನ ಪ್ರಯತ್ನವನ್ನು ಸಫಲಮಾಡುವರು.


ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.


ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.


ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.


ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು