Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:23 - ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ದೂತನು ನಿಮ್ಮ ಮುಂದೆ ಮುಂದೆ ನಡೆದು ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು; ಅವರನ್ನಾದರೋ ನಾನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:23
13 ತಿಳಿವುಗಳ ಹೋಲಿಕೆ  

“ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಮತ್ತು ನಿಮ್ಮ ಪುತ್ರಪುತ್ರಿಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ,” ಎಂದನು.


ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.


“ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.


ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು