Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:27 - ಕನ್ನಡ ಸಮಕಾಲಿಕ ಅನುವಾದ

27 “ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ಹೋಗುವ ಎಲ್ಲಾ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ ಕಳವಳವನ್ನು ಉಂಟು ಮಾಡಿ ನಿಮ್ಮನ್ನು ವಿರೋಧಿಸುವವರನ್ನು ಓಡಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನೀವು ನಿಮ್ಮ ವೈರಿಗಳ ವಿರುದ್ಧ ಯುದ್ಧ ಮಾಡುವಾಗ, ನಿಮ್ಮ ವೈರಿಗಳನ್ನೆಲ್ಲಾ ಸೋಲಿಸುವಂತೆ ನಾನು ನಿಮಗೆ ನನ್ನ ಮಹಾಶಕ್ತಿಯಿಂದ ಸಹಾಯ ಮಾಡುವೆನು. ನಿಮ್ಮ ವೈರಿಗಳು ಯುದ್ಧದಲ್ಲಿ ಭಯದಿಂದಲೂ ಗಲಿಬಿಲಿಯಿಂದಲೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:27
17 ತಿಳಿವುಗಳ ಹೋಲಿಕೆ  

ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು.


ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.


ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.


ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ.


ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.


ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.


ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.


ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.


ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು