Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:29 - ಕನ್ನಡ ಸಮಕಾಲಿಕ ಅನುವಾದ

29 ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ಆ ನಾಡಿನಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ನಾನು ಒಂದೇ ವರುಷದೊಳಗೆ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವದಿಲ್ಲ; ಯಾಕಂದರೆ ದೇಶದಲ್ಲಿ ಜನರು ಕಡಿಮೆಯಾಗುವದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:29
7 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು.


ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.


ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.


ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿಸಿಕೊಳ್ಳುವವರೆಗೆ ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.


ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು