Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:31 - ಕನ್ನಡ ಸಮಕಾಲಿಕ ಅನುವಾದ

31 “ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:31
37 ತಿಳಿವುಗಳ ಹೋಲಿಕೆ  

ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.


ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.


ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.


ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


“ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.


ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.


“ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.


“ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.


ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು.


ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.


ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.


ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು.


ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.


ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.


ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.


“ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.


ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು.


“ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು.


ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು