ವಿಮೋಚನಕಾಂಡ 23:33 - ಕನ್ನಡ ಸಮಕಾಲಿಕ ಅನುವಾದ33 ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು; ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಾರು; ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.” ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.