Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮನ್ನು ಹಗೆ ಮಾಡುವವನ ಕತ್ತೆಯು ತನ್ನ ಹೊರೆಯ ಕೆಳಗೆ ಬಿದ್ದಿರುವುದನ್ನು ನೀವು ಕಂಡಾಗ, ಅವನಿಗೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದಿದ್ದರೂ ನೀವು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಹಗೆಯವನ ಕತ್ತೆ ಹೊರೆಯನ್ನು ತಾಳದೆ ಕೆಳಗೆ ಬಿದ್ದಿರುವುದನ್ನು ಕಂಡರೆ ಅದನ್ನು ಎಬ್ಬಿಸುವುದಕ್ಕೆ ನಿನಗೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಅದನ್ನು ಎಬ್ಬಿಸಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಹಗೆಯವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ಕಂಡರೆ ಅದನ್ನು ಎಬ್ಬಿಸುವದಕ್ಕೆ ಮನಸ್ಸಿಲ್ಲದೆ ಹೋದಾಗ್ಯೂ ಅವನಿಗೆ ಸಹಾಯಮಾಡಿ ಎಬ್ಬಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:5
3 ತಿಳಿವುಗಳ ಹೋಲಿಕೆ  

ನಿನ್ನ ಸಹೋದರನ ಕತ್ತೆಯಾಗಲಿ, ಎತ್ತಾಗಲಿ, ಮಾರ್ಗದಲ್ಲಿ ಬಿದ್ದಿರುವುದನ್ನು ನೋಡಿದರೆ ಅಲಕ್ಷ್ಯ ಮಾಡಬೇಡ. ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.


ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.


ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು