ವಿಮೋಚನಕಾಂಡ 24:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |