ವಿಮೋಚನಕಾಂಡ 24:14 - ಕನ್ನಡ ಸಮಕಾಲಿಕ ಅನುವಾದ14 ಆಗ ಮೋಶೆ ಹಿರಿಯರಿಗೆ, “ನಾವು ನಿಮ್ಮ ಬಳಿಗೆ ತಿರುಗಿ ಬರುವವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರಿ. ಆರೋನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿಗಾದರೂ ವ್ಯಾಜ್ಯವಿದ್ದರೆ ಅವರ ಬಳಿಗೆ ಹೋಗಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮೊದಲು ಅವನು ಹಿರಿಯರಿಗೆ - ನಾವು ತಿರಿಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರ್ರಿ; ಆರೋನನೂ ಹೂರನೂ ನಿಮ್ಮ ಬಳಿಯಲ್ಲಿದ್ದಾರಷ್ಟೆ; ಯಾವನಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |