Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:2 - ಕನ್ನಡ ಸಮಕಾಲಿಕ ಅನುವಾದ

2 ಮೋಶೆ ಒಬ್ಬನೇ ಯೆಹೋವ ದೇವರ ಸಮೀಪಕ್ಕೆ ಬರಲಿ. ಬೇರೆ ಯಾರೂ ಸಮೀಪಕ್ಕೆ ಬರಬಾರದು. ಜನರೂ ಅವನ ಸಂಗಡ ಮೇಲೇರಿ ಬರಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೋಶೆ ಒಬ್ಬನೇ ಹೊರತು ಅವನ ಜೊತೆಯವರಲ್ಲಿ ಯಾರೂ ನನ್ನ ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಅವನ ಜೊತೆಯವರಲ್ಲಿ ಸಮೀಪಕ್ಕೆ ಯಾರೂ ಬರಬಾರದು; ವಿುಕ್ಕ ಜನರು ಬೆಟ್ಟವನ್ನು ಹತ್ತಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಏರಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:2
12 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.


ಮೋಶೆ ಬೆಟ್ಟವನ್ನೇರಿ ಹೋದಾಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.


ತರುವಾಯ ಯೆಹೋವ ದೇವರು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವ ದೇವರಾದ ನನ್ನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.


ಮೋಶೆಯು ಬಂದು ಯೆಹೋವ ದೇವರ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲಾ ಒಂದೇ ಸ್ವರದಿಂದ, “ಯೆಹೋವ ದೇವರು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ,” ಎಂದು ಉತ್ತರಕೊಟ್ಟರು.


ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ, ‘ಅವರು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತು ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು