ವಿಮೋಚನಕಾಂಡ 24:3 - ಕನ್ನಡ ಸಮಕಾಲಿಕ ಅನುವಾದ3 ಮೋಶೆಯು ಬಂದು ಯೆಹೋವ ದೇವರ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲಾ ಒಂದೇ ಸ್ವರದಿಂದ, “ಯೆಹೋವ ದೇವರು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು. ಅಧ್ಯಾಯವನ್ನು ನೋಡಿ |