ವಿಮೋಚನಕಾಂಡ 24:8 - ಕನ್ನಡ ಸಮಕಾಲಿಕ ಅನುವಾದ8 ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿವಿುಕಿಸಿ - ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |