Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:10 - ಕನ್ನಡ ಸಮಕಾಲಿಕ ಅನುವಾದ

10 “ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರವಾಗಿರುವ ಮಂಜೂಷವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಹಾಗು ಒಂದುವರೆ ಮೊಳ ಎತ್ತರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:10
11 ತಿಳಿವುಗಳ ಹೋಲಿಕೆ  

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು.


ಮಂಜೂಷವನ್ನು, ಅದರ ಕೋಲುಗಳನ್ನು, ಅವುಗಳೊಂದಿಗೆ ಕರುಣಾಸನವನ್ನು, ಮರೆಮಾಡುವ ಪರದೆಯನ್ನು,


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,


“ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು,


ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.


ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು