Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:16 - ಕನ್ನಡ ಸಮಕಾಲಿಕ ಅನುವಾದ

16 ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:16
22 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


“ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು.


ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.


“ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.


ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು.


ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.


ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ, ಅವನು ಯೆಹೋವ ದೇವರ ಸಂಗಡ ಬೆಟ್ಟದಲ್ಲಿ ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿಸುತ್ತದೆಂದು ಬೆಟ್ಟದಿಂದ ಇಳಿದಾಗ ಮೋಶೆಗೆ ತಿಳಿಯಲಿಲ್ಲ.


ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.


ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.


ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.


ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.


“ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು.


ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು