Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:2 - ಕನ್ನಡ ಸಮಕಾಲಿಕ ಅನುವಾದ

2 “ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ನನಗೋಸ್ಕರ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:2
16 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.


ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.


ಆಗ ಜನರು ಯೆರೂಸಲೇಮಿನಲ್ಲಿ ವಾಸವಾಗಿರಲು, ಸಮ್ಮತಿಪಟ್ಟವರೆಲ್ಲರನ್ನು ಆಶೀರ್ವದಿಸಿದರು.


ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.


ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.


ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.


ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.


“ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: “ಚಿನ್ನ, ಬೆಳ್ಳಿ, ಕಂಚು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು