Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:20 - ಕನ್ನಡ ಸಮಕಾಲಿಕ ಅನುವಾದ

20 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:20
22 ತಿಳಿವುಗಳ ಹೋಲಿಕೆ  

ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ, ರೆಕ್ಕೆಗಳನ್ನೂ ಚಾಚಿಕೊಂಡು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.


ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.


ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಈ ಕಾರಣದಿಂದಲೂ ದೇವದೂತರ ನಿಮಿತ್ತವಾಗಿಯೂ ಸ್ತ್ರೀಯ ತಲೆಯ ಮೇಲೆ ಅಧಿಕಾರದ ಮುಸುಕನ್ನು ಹಾಕಿರಬೇಕು.


ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.


ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಅವುಗಳು ಹೋದವು. ಚಕ್ರಗಳು ಸಹ ಅವುಗಳಿಗೆದುರಾಗಿ ಮೇಲಕ್ಕೆ ಏಳುತ್ತಿದ್ದವು. ಏಕೆಂದರೆ ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.


ಮಹಾಪರಿಶುದ್ಧವಾದ ಸ್ಥಳದಲ್ಲಿ ಎರಡು ಕೆರೂಬಿಗಳನ್ನು ಮಾಡಿಸಿ, ಬಂಗಾರದಿಂದ ಅವುಗಳನ್ನು ಹೊದಿಸಿದನು.


ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.


ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿಸಬೇಕು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿಸಬೇಕು.


ಆ ಕೆರೂಬಿಗಳನ್ನು ದೇವಾಲಯದ ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವುದರಿಂದ ಒಂದು ರೆಕ್ಕೆಯ ಈ ಭಾಗದ ಗೋಡೆಯನ್ನೂ, ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು. ಆಲಯದ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.


ಅವನು ದೈವೋಕ್ತಿಯ ಸ್ಥಾನದಲ್ಲಿ ಹಿಪ್ಪೇಮರಗಳಿಂದ ಎರಡು ಕೆರೂಬಿಗಳನ್ನು ಮಾಡಿಸಿದನು. ಒಂದೊಂದು 4.4 ಮೀಟರ್ ಎತ್ತರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು