ವಿಮೋಚನಕಾಂಡ 25:31 - ಕನ್ನಡ ಸಮಕಾಲಿಕ ಅನುವಾದ31 “ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು. ಅಧ್ಯಾಯವನ್ನು ನೋಡಿ |
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.