Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:14 - ಕನ್ನಡ ಸಮಕಾಲಿಕ ಅನುವಾದ

14 ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಹಾಗು ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಹೊದಿಕೆಗೆ ಹೊದಿಸುವದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:14
14 ತಿಳಿವುಗಳ ಹೋಲಿಕೆ  

ಅದಲ್ಲದೆ ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಿದರು. ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದರು.


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.


ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.


ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.


ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು.


ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲುಹಂದಿಗಳ ಚರ್ಮಗಳ ಹೊದಿಕೆಗಳನ್ನು, ಮರೆಮಾಡುವ ಪರದೆಯನ್ನು,


ನೀಲಿ, ಧೂಮ್ರ, ರಕ್ತವರ್ಣ ದಾರಗಳೂ ನಯವಾದ ನಾರುಮಡಿ, ಮೇಕೆಯ ಕೂದಲು, ಟಗರುಗಳ ಕೆಂಪು ಬಣ್ಣದ ಚರ್ಮಗಳೂ ಕಡಲುಹಂದಿಯ ಚರ್ಮಗಳೂ ಯಾರ ಬಳಿಯಲ್ಲಿದ್ದವೋ ಅವರೆಲ್ಲರೂ ತಂದರು.


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ,


ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ.


ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು