Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:19 - ಕನ್ನಡ ಸಮಕಾಲಿಕ ಅನುವಾದ

19 ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಬೇಕು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೇ ಕಲ್ಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೇಕಲ್ಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:19
14 ತಿಳಿವುಗಳ ಹೋಲಿಕೆ  

ಪರಿಶುದ್ಧಾಲಯದ ಗದ್ದಿಗೇ ಕಲ್ಲುಗಳಿಗೆ ಮತ್ತು ಪರದೆಗಳ ಗದ್ದಿಗೇ ಕಲ್ಲುಗಳಿಗೆ ಎರಕ ಹೊಯ್ಯಲು 3,400 ಕಿಲೋಗ್ರಾಂ ಬೆಳ್ಳಿ ಹಿಡಿಯಿತು. ಒಂದು ಗದ್ದಿಗೇ ಕಲ್ಲಿಗೆ ಮೂವತ್ನಾಲ್ಕು ಕಿಲೋಗ್ರಾಂನಂತೆ ನೂರು ಗದ್ದಿಗೇ ಕಲ್ಲುಗಳಿಗೆ 3,400 ಕಿಲೋಗ್ರಾಂ ಬೆಳ್ಳಿ ಆಯಿತು.


ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.


ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ


ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು.


ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಬೇಕು.


ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.


ಹೀಗೆ ಅವು ಎಂಟು ಚೌಕಟ್ಟುಗಳೂ ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳೂ ಇರುವುದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳೂ ಇರಬೇಕು.


ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಬೇಕು.


ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನೂ,


ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಬೇಕು. ಅದೇ ಪ್ರಕಾರ ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು