Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:34 - ಕನ್ನಡ ಸಮಕಾಲಿಕ ಅನುವಾದ

34 ಮಹಾಪರಿಶುದ್ಧ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮೇಲೆ ಕರುಣಾಸನವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಮಹಾಪವಿತ್ರ ಸ್ಥಾನದಲ್ಲಿರುವ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:34
6 ತಿಳಿವುಗಳ ಹೋಲಿಕೆ  

ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.


ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.


ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಅವನು ಆಲಯದ ಕಡೆಗಳಲ್ಲಿ 9 ಮೀಟರ್ ನೆಲವನ್ನೂ, ಗೋಡೆಗಳನ್ನೂ, ದೇವದಾರುಗಳ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಅತಿ ಪರಿಶುದ್ಧಸ್ಥಳದ ಅಂಗನ ಅಥವಾ ಮಹಾಪರಿಶುದ್ಧ ಸ್ಥಳವೆಂದು ಕಟ್ಟಿಸಿದನು.


ಅವನು ಒಳಗಿನ ಪರಿಶುದ್ಧಸ್ಥಳದ ಉದ್ದವನ್ನು ಅಳೆದನು; ಅದು ಸುಮಾರು ಹತ್ತು ಮೀಟರ್ ಆಗಿತ್ತು; ಅದರ ಅಗಲವು ಮುಖ್ಯ ಸಭಾಂಗಣದ ಕೊನೆಯವರೆಗೂ ಸುಮಾರು ಹತ್ತು ಮೀಟರ್ ಆಗಿತ್ತು. ಅವನು ನನಗೆ, “ಇದು ಅತ್ಯಂತ ಪವಿತ್ರ ಸ್ಥಳವಾಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು