Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:6 - ಕನ್ನಡ ಸಮಕಾಲಿಕ ಅನುವಾದ

6 ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದೂ ಅಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು; ಹೀಗೆ ಒಂದೇ ಗುಡಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:6
11 ತಿಳಿವುಗಳ ಹೋಲಿಕೆ  

ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.


ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,


ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡಣೆಗೆ ಅವರು ಕಂಚಿನ ಐವತ್ತು ಕೊಂಡಿಗಳನ್ನು ಮಾಡಿದರು.


ಅವರು ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಎರಡು ಜೋಡಣೆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು. ಹೀಗೆ ಅದು ಒಂದೇ ಗುಡಾರವಾಯಿತು.


“ದೇವದರ್ಶನದ ಗುಡಾರವನ್ನು, ಅದರ ಮೇಲ್ಹೊದಿಕೆಯನ್ನು, ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,


ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.


ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು.


ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು.


“ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು