ವಿಮೋಚನಕಾಂಡ 27:16 - ಕನ್ನಡ ಸಮಕಾಲಿಕ ಅನುವಾದ16 “ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ, ಅದಕ್ಕೆ ನಾಲ್ಕು ಸ್ತಂಭಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಂಗಳದ ಬಾಗಲಲ್ಲೇ ಇಪ್ಪತ್ತು ಮೊಳದ ಪರದೆಯು ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಬುಟೇದಾರೀ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೇ ಕಲ್ಲುಗಳೂ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿ |