Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:2 - ಕನ್ನಡ ಸಮಕಾಲಿಕ ಅನುವಾದ

2 ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು; ಅವು ಯಜ್ಞವೇದಿಗೆ ಏಕವಾಗಿರಬೇಕು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:2
19 ತಿಳಿವುಗಳ ಹೋಲಿಕೆ  

ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.


ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು.


ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.


ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.


“ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.


ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.


ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು.


ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್.


ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು