ವಿಮೋಚನಕಾಂಡ 27:3 - ಕನ್ನಡ ಸಮಕಾಲಿಕ ಅನುವಾದ3 ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿ |