Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:11 - ಕನ್ನಡ ಸಮಕಾಲಿಕ ಅನುವಾದ

11 ಶಿಲ್ಪಿಗನು ಕಲ್ಲಿನ ಮೇಲೆ ಮುದ್ರೆ ಕೆತ್ತುವ ಪ್ರಕಾರ, ಆ ಎರಡೂ ರತ್ನಗಳ ಮೇಲೆ ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿಸಿ, ಅವುಗಳನ್ನು ಬಂಗಾರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ ಆ ಎರಡು ರತ್ನಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:11
16 ತಿಳಿವುಗಳ ಹೋಲಿಕೆ  

ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.


“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.


ಮುದ್ರೆ ಕೆತ್ತುವ ಪ್ರಕಾರ, ಗೋಮೇಧಿಕ ರತ್ನಗಳಲ್ಲಿ ಹನ್ನೆರಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿ ಬಂಗಾರದ ಕುಂದಣದಲ್ಲಿ ಇಟ್ಟರು.


“ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’


ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಬೇಕು.


ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.


ಒಂದು ರತ್ನದ ಮೇಲೆ ಆರು ಹೆಸರುಗಳನ್ನು ಮತ್ತೊಂದು ರತ್ನದ ಮೇಲೆ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಪ್ರಕಾರ ಕೆತ್ತಬೇಕು.


ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು