Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:12 - ಕನ್ನಡ ಸಮಕಾಲಿಕ ಅನುವಾದ

12 ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಅವು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗೆಲ್ಲಾ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವದಕ್ಕಾಗಿ ತನ್ನ ಎರಡು ಭುಜಗಳ ಮೇಲೆ ಧರಿಸಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಈ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:12
23 ತಿಳಿವುಗಳ ಹೋಲಿಕೆ  

“ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.”


ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.


ಈ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳಿರಬೇಕು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಶಿಲ್ಪಿಗನು ಕಲ್ಲಿನ ಮೇಲೆ ಮುದ್ರೆ ಕೆತ್ತುವ ಪ್ರಕಾರ, ಆ ಎರಡೂ ರತ್ನಗಳ ಮೇಲೆ ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿಸಿ, ಅವುಗಳನ್ನು ಬಂಗಾರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.


ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: “ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.”


ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು