ವಿಮೋಚನಕಾಂಡ 28:3 - ಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು. ಅಧ್ಯಾಯವನ್ನು ನೋಡಿ |