ವಿಮೋಚನಕಾಂಡ 28:33 - ಕನ್ನಡ ಸಮಕಾಲಿಕ ಅನುವಾದ33 ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ದಾಳಿಂಬೆ ಹಣ್ಣಿನಂತೆ ಅದರ ಅಂಚಿನ ಸುತ್ತಲೂ ಮಾಡಿ, ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನೂ ಸುತ್ತಲೂ ಇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮೇಲಂಗಿಯ ಅಂಚಿನ ಸುತ್ತಲೂ ನೀಲಿ, ಊದ ಹಾಗು ಕಡುಗೆಂಪು ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನೂ ಅವುಗಳ ನಡುವೆ ಗೆಜ್ಜೆಗಳನ್ನೂ ತಗಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನೂ ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನೂ ತಗಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿ |