ವಿಮೋಚನಕಾಂಡ 28:35 - ಕನ್ನಡ ಸಮಕಾಲಿಕ ಅನುವಾದ35 ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಅವನು ಯೆಹೋವ ದೇವರ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ, ಅವನು ಸಾಯದಂತೆ ಅವನ ಶಬ್ದವು ಕೇಳಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆರೋನನು ಸೇವೆ ಸಲ್ಲಿಸುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಪವಿತ್ರಸ್ಥಾನದೊಳಗೆ ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಹಾಗು ಹೋಗುವಾಗ ಆ ಗೆಜ್ಜೆಗಳ ಶಬ್ದ ಕೇಳಿಸಬೇಕು. ಇಲ್ಲದಿದ್ದರೆ ಅವನು ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆರೋನನು ಸೇವೆಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದ ಹಾಗೆ ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆರೋನನು ಯಾಜಕನಾಗಿ ಸೇವೆಮಾಡುವಾಗ ಈ ನಿಲುವಂಗಿಯನ್ನು ಧರಿಸಿಕೊಂಡಿರುವನು. ಯೆಹೋವನ ಮುಂದೆ ನಿಲ್ಲುವುದಕ್ಕೆ ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ ಗೆಜ್ಜೆಗಳು ಶಬ್ದ ಮಾಡುತ್ತಿರುತ್ತವೆ. ಅವನು ಪವಿತ್ರಸ್ಥಳವನ್ನು ಬಿಡುವಾಗಲೂ ಗೆಜ್ಜೆಗಳು ಶಬ್ಧ ಮಾಡುತ್ತಿರುತ್ತವೆ. ಹೀಗಾಗಿ ಆರೋನನು ಸಾಯುವುದಿಲ್ಲ. ಅಧ್ಯಾಯವನ್ನು ನೋಡಿ |