Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:43 - ಕನ್ನಡ ಸಮಕಾಲಿಕ ಅನುವಾದ

43 ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಪವಿತ್ರಸ್ಥಾನದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಹಾಕಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:43
18 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು.


“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.


ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.


“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


“ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.


ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.


ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.


ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.


“ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.


ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.


ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು.


ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು